ಕಾರ್ಮಿಕರ ಕಾರ್ಡ್ ಇರುವ ಮಕ್ಕಳಿಗೆ ಸರ್ಕಾರದಿಂದ ಉಚಿತವಾಗಿ ಟ್ಯಾಬ್ & ವಿದ್ಯಾರ್ಥಿ ಕಿಟ್ ವಿತರಣೆ ಮಾಡುತ್ತಿದ್ದಾರೆ.! ನೀವು ಕೂಡ ಪಡೆಯಬಹುದು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.!

 

ಕಳೆದ ಬಾರಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವು ಅಧಿಕಾರದಲ್ಲಿದ್ದಾಗ ಕಟ್ಟಡ ಕಾರ್ಮಿಕರಿಗಾಗಿ ಕೆಲವು ವಿಶೇಷ ಯೋಜನೆಯನ್ನು ಜಾರಿಗೆ ತಂದಿತ್ತು. ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಪರಿಸ್ಥಿತಿ ಸುಧಾರಿಸುವ ಉದ್ದೇಶದಿಂದಾಗಿ ಈ ಯೋಜನೆಗಳನ್ನು ಜಾರಿಗೆ ತಂದು ಇದನ್ನು ಪಡೆದುಕೊಳ್ಳಲು ಕಾರ್ಮಿಕರು ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿ ಮಾಡಿಕೊಂಡು ಲೇಬರ್ ಕಾಡ್ ಪಡೆದುಕೊಳ್ಳಬೇಕು ಎಂದು ತಿಳಿಸಲಾಗಿತ್ತು.

ನಂತರ ಲೇಬರ್ ಕಾರ್ಡ್ ಹೊಂದಿರುವ ಎಲ್ಲಾ ಕಾರ್ಮಿಕರಿಗೂ ಹಾಗೂ ಕಾರ್ಮಿಕರ ಮಕ್ಕಳಿಗೂ ಕೂಡ ಸರ್ಕಾರದಿಂದ ಸಾಕಷ್ಟು ಅನುದಾನಗಳು ಹಾಗೂ ಸಹಾಯಧನಗಳು ಸಿಗುತ್ತಿದ್ದವು. ಕಾರ್ಮಿಕರ ಕಾರ್ಡ್ ಹೊಂದಿರುವವರಿಗೆ ಮಕ್ಕಳಿಗೆ ವಿವಾಹ ಪ್ರೋತ್ಸಾಹಧನ, ಶಾಲಾ ಕಾಲೇಜಿಗೆ ಹೋಗುವ ಮಕ್ಕಳಿಗೆ ವಿದ್ಯಾರ್ಥಿ ಕಿಟ್, ಟ್ಯಾಬ್ ವಿತರಣೆ ಮತ್ತು ಕಟಡ ಕಾರ್ಮಿಕರ ಮಕ್ಕಳಿಗೆ ಸ್ಕಾಲರ್ಶಿಪ್ ಸೇರಿದಂತೆ ಅನೇಕ ಪ್ರಯೋಜನಗಳು ಕಾರ್ಮಿಕರ ಮಕ್ಕಳಿಗೆ ಸಿಗುತ್ತಿತ್ತು.

ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸ್ಥಾಪನೆ ಆಗಿದೆ. ಕಾಂಗ್ರೆಸ್ ಸರ್ಕಾರವು ತನ್ನ 5 ಗ್ಯಾರಂಟಿ ಕಾರ್ಡ್ಗಳನ್ನು ಜಾರಿಗೆ ತರುವುದರ ಜೊತೆಗೆ ತನ್ನ ಹಳೆಯ ಯೋಜನೆಗಳನ್ನು ಮತ್ತು BJP ಸರ್ಕಾರವು ರೂಪಿಸಿದ್ದ ಕೆಲವು ಜನಪರ ಯೋಜನೆಗಳನ್ನು ಕೂಡ ಮುಂದುವರಿಸಿಕೊಂಡು ಹೋಗುವ ನಿರ್ಧಾರಕ್ಕೆ ಬಂದಿದೆ. ಇದರಲ್ಲಿ ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ಕಿಟ್ ವಿತರಣೆ ಮತ್ತು ಟ್ಯಾಬ್ ವಿತರಣೆ ಕೂಡ ಒಂದು.

ಈಗಾಗಲೇ 2023-24ನೇ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ ಸಿಗುವ ವಿದ್ಯಾರ್ಥಿ ಕಿಟ್ ಮತ್ತು ಟ್ಯಾಬ್ ಪಡೆದುಕೊಳ್ಳಲು ಅಜ್ಜಿ ಹಾಕಬೇಕು ಎಂದು ಫ್ರೀ ಟ್ಯಾಬ್ ಪಡೆದುಕೊಳ್ಳಲು ಅರ್ಜಿ ಸಲ್ಲಿಸಲು ತಿಳಿಸಲಾಗಿತ್ತು. ತಿಂಗಳುಗಳ ಹಿಂದೆಯೇ ಆಯಾ ಜಿಲ್ಲೆಯ ಕಾರ್ಮಿಕ ಕಲ್ಯಾಣ ಮಂಡಳಿ ಕಚೇರಿಗಳಲ್ಲಿ ಆಫ್ ಲೈನ್ನಲ್ಲಿ ಪೂರಕ ದಾಖಲೆಗಳ ಜೊತೆ ಬಂದು ಅರ್ಜಿ ಸಲ್ಲಿಸಲು ಇರುವ ಮಾರ್ಗಸೂಚಿಯನ್ನು ಅಧಿಸೂಚನೆ ಹೊರಡಿಸಿ ಇಲಾಖೆ ತಿಳಿಸಿತ್ತು.

ಈಗ ರಾಜ್ಯದಲ್ಲಿ ಶಾಲಾ ಕಾಲೇಜುಗಳು ಶುರುವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಆಗುವ ಅನಾನುಕೂಲತೆಯನ್ನು ತಪ್ಪಿಸುವ ಕಾರಣದಿಂದ ಮೊದಲಿಗೆ ವಿದ್ಯಾರ್ಥಿಗಳಿಗೆ ಕೊಡುವ ವಿದ್ಯಾರ್ಥಿ ಕಿಟ್ ಅನ್ನು ವಿತರಣೆ ಮಾಡುವ ಕಾರ್ಯವನ್ನು ಸರ್ಕಾರ ಕೈಗೆತ್ತಿಕೊಂಡಿದೆ. ನೂತನವಾಗಿ ಕಾರ್ಮಿಕ ಸಚಿವರಾಗಿರುವ ಸಂತೋಷ್ ಲಾಡ್ ಅವರು ಮತ್ತು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಈ ಕಾರ್ಯಗಳಿಗೆ ಚಾಲನೆ ನೀಡಿದ್ದಾರೆ.

ಈಗಷ್ಟೇ ತುಮಕೂರು ಜಿಲ್ಲೆಯ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸರ್ಕಾರ ಕಡೆಯಿಂದ ವಿದ್ಯಾರ್ಥಿ ಕಿಟ್ ಮತ್ತು ಫ್ರೀ ಟ್ಯಾಬ್ ಸಿಕ್ಕಿದೆ. ಶೀಘ್ರವಾಗಿಯೇ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೂಡ ಅರ್ಜಿ ಹಾಕಿರುವ ಫಲಾನುಭವಿಗಳಿಗೂ ವಿತರಣೆಯಾಗಲಿದೆ. ಕಾಂಗ್ರೆಸ್ ಸರ್ಕಾರ ಹೊಸದಾಗಿ ಘೋಷಿಸಿರುವ ಯೋಜನೆಗಳ ಜೊತೆ ಕಾರ್ಮಿಕರ ಮಕ್ಕಳ ಕಾಳಜಿಯನ್ನು ಮಾಡಿರುವುದು ಸಂತಸದ ವಿಷಯ ಆಗಿದೆ.

ನೀವು ಕೂಡ ಕಟ್ಟಡ ಕಾರ್ಮಿಕರ ಮಕ್ಕಳಾಗಿದ್ದು ನಿಮ್ಮ ಪೋಷಕರು ಕಾರ್ಮಿಕ ಇಲಾಖೆಯಲ್ಲಿ ನೋಂದಣಿ ಆಗಿ ಲೇಬರ್ ಕಾರ್ಡ್ ಪಡೆದು ಒಂದು ವರ್ಷ ಆಗಿದ್ದರೆ ನಿಮಗೂ ಸಹ ಈ ರೀತಿ ವಿದ್ಯಾರ್ಥಿ ಕಿಟ್ ಹಾಗೂ ಫ್ರೀ ಟ್ಯಾಬ್ ಪಡೆಯುವ ಅವಕಾಶ ಇರುತ್ತದೆ. ಅದಕ್ಕಾಗಿ ನೀವು ಪ್ರತಿ ವರ್ಷ ಶೈಕ್ಷಣಿಕ ವರ್ಷಗಳು ಆರಂಭವಾಗುವ ಮುನ್ನ ಕಾರ್ಮಿಕ ಇಲಾಖೆಯಿಂದ ಅಧಿಸೂಚನೆ ಹೊರಡಿಸಿ ಅರ್ಜಿ ಆಹ್ವಾನ ಮಾಡಿದ ಸಮಯದಲ್ಲಿ ಅರ್ಜಿ ಸಲ್ಲಿಸಬೇಕು. ನಂತರ ಸರ್ಕಾರವು ಕಾರ್ಯಕ್ರಮ ನಡೆಸಿ ಫಲಾನುಭವಿಗಳಿಗೆ ವಿತರಣೆ ಮಾಡುತ್ತದೆ. ಈ ಉಪಯುಕ್ತ ಮಾಹಿತಿಯನ್ನು ನಿಮ್ಮ ಕುಟುಂಬದವರು ಹಾಗೂ ಸ್ನೇಹಿತರ ಜೊತೆಗೆ ಹಂಚಿಕೊಳ್ಳಿ, ಆ ಮೂಲಕ ಎಲ್ಲಾ ಕಾರ್ಮಿಕರಿಗೂ ಈ ಮಾಹಿತಿ ತಿಳಿಯುವಂತೆ ಮಾಡಿ.

Leave a Comment

%d bloggers like this: