ರಾಜ್ಯದಲ್ಲಿ ಕರ್ನಾಟಕ ಕಟ್ಟಡ ಕಾರ್ಮಿಕ ಮತ್ತು ಇತರೆ ನಿರ್ಮಾಣ ಕಾರ್ಮಿಕ ಮಂಡಳಿಯಲ್ಲಿ ನೋಂದಾಯಿಸಿಕೊಂಡು ಕಾರ್ಮಿಕರ ಕಾರ್ಡ್ (Labour Card) ಹೊಂದಿರುವ ಬಡ ಕಾರ್ಮಿಕರಿಗೆ ಸರ್ಕಾರದ ವತಿಯಿಂದ ಸಾಕಷ್ಟು ಯೋಜನೆಗಳ ನೆರವು ಸಿಗುತ್ತದೆ.
ಕಾರ್ಮಿಕರಿಗೆ ಆರೋಗ್ಯ ರಕ್ಷಣೆಗಾಗಿ ಕೆಲಸ ವಿನಾಯಿತಿಗಳು, ಉಚಿತ ಪ್ರಯಾಣ, ಪಿಂಚಣಿ ವ್ಯವಸ್ಥೆ ಇನ್ನು ಮುಂತಾದವು ಮಾತ್ರವಲ್ಲದೆ. ಕಾರ್ಮಿಕನ ಕುಟುಂಬಕ್ಕೂ ಕೂಡ ಅನ್ವಯವಾಗುವಂತೆ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿ ವೇತನ, ವಿದ್ಯಾರ್ಥಿ ಕಿಟ್, ಉಚಿತ ಲ್ಯಾಪ್ಟಾಪ್ ಮತ್ತು ಮಕ್ಕಳ ಮದುವೆಗೆ ಸಹಾಯಧನ ಇನ್ನು ಮುಂತಾದ ಅನೇಕ ಕಲ್ಯಾಣ ಯೋಜನೆಗಳನ್ನು ಮಂಡಳಿ ವತಿಯಿಂದ ರೂಪಿಸಲಾಗಿದೆ.
ಅದರಲ್ಲಿ ಸದ್ಯಕ್ಕೆ ಕಾರ್ಮಿಕರ ಮಕ್ಕಳಿಗೆ ನೀಡುತ್ತಿರುವ ಮದುವೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ ಮಾಡಲಾಗಿದ್ದು ಯಾವ ರೀತಿ ಅರ್ಜಿ ಸಲ್ಲಿಸಬೇಕು? ಏನೆಲ್ಲ ದಾಖಲೆಗಳನ್ನು ನೀಡಬೇಕು? ಇದಕ್ಕೆ ಇರುವ ನಿಬಂಧನೆಗಳು ಏನು? ಎನ್ನುವ ಮಾಹಿತಿಯನ್ನು ಈ ಅಂಕಣದಲ್ಲಿ ತಿಳಿಸಿಕೊಡುತ್ತಿದ್ದೇವೆ. ನೀವು ಅರ್ಹರಾಗಿದ್ದರೆ ತಪ್ಪದೇ ಈ ಪ್ರಕಾರವಾಗಿ ಅರ್ಜಿ ಸಲ್ಲಿಸಿ ಯೋಜನೆಯ ಪ್ರಯೋಜನ ಪಡೆದುಕೊಳ್ಳಿ.
ಈ ಸುದ್ದಿ ಓದಿ:- ಗೃಹಲಕ್ಷ್ಮಿ ಯೋಜನೆ 6ನೇ ಕಂತಿನ ಹಣ & ಪೆಂಡಿಂಗ್ ಇರುವ ಎಲ್ಲಾ ಹಣ ಈ ದಿನ ನಿಮ್ಮ ಖಾತೆಗೆ ಜಮೆ ಆಗುತ್ತೆ.!
ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಇತರೆ ನಿರ್ಮಾಣ ಮಂಡಳಿಯಲ್ಲಿ ನೋಂದಾಯಿತರಾಗಿರುವ ಕಟ್ಟಡ ಕಾರ್ಮಿಕರು ತಮ್ಮ ಮೊದಲ ಮದುವೆ ಅಥವಾ ಕಾರ್ಮಿಕನನ್ನು ಅವಲಂಬಿಸಿರುವ ಕುಟುಂಬ ಎಂದರೆ ಆತನ ಮಗ ಅಥವಾ ಮಗಳ ಮದುವೆಗೆ ಸರ್ಕಾರ ನೀಡುತ್ತಿರುವ ಸಹಾಯಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದು.
ನೋಂದಾಯಿತ ಕಾರ್ಮಿಕರ ಎರಡು ಮಕ್ಕಳ ಮದುವೆಯ ವೆಚ್ಚವನ್ನು ಭರಿಸಲು ಸಹಾಯಧನವಾಗಿ ರೂ.60,000/- ಗಳನ್ನೂ ನೀಡಲಾಗುತ್ತದೆ. ಕಾರ್ಮಿಕ ಮಂಡಳಿಯ ಕಾರ್ಯದರ್ಶಿಯ ಅಥವಾ ಮಂಡಳಿಯ ಪರವಾಗಿ ನೇಮಕವಾದ ಅಧಿಕೃತ ಅಧಿಕಾರಿಯು ನೋಂದಾಯಿತ ಕಾರ್ಮಿಕ ರಿಂದ ಅರ್ಜಿಯನ್ನು ಸ್ವೀಕರಿಸಿ ಅರ್ಜಿಗಳ ಪರಿಶೀಲನೆ ನಡೆಸಿ ಅನುಮೋದಿಸುತ್ತಾರೆ. ಆದರೆ ಅದಕ್ಕೆ ಕೆಲವು ಕಂಡಿಷನ್ ಗಳು ಇವೆ ಮತ್ತು ಕೆಲವು ದಾಖಲೆಗಳನ್ನು ಕೂಡ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಕಂಡಿಷನ್ ಗಳು:-
* ನೋಂದಾಯಿತ ಕಟ್ಟಡ ಕಾರ್ಮಿಕನು ಮದುವೆಯ ಸಹಾಯ ಧನ ಪಡೆಯಲು ಮದುವೆಯಾದ ದಿನಾಂಕದಿಂದ ನೋಂದಣಿಯಾದ ದಿನಾಂಕದವರೆಗೆ ಒಂದು ವರ್ಷ ಸದಸ್ಯತ್ವವನ್ನು ಪೂರೈಸಿರಬೇಕು.
* ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬವು ಎರಡು ಬಾರಿ ಮಾತ್ರ ಸಹಾಯಧನ ಪಡೆಯಲು ಅರ್ಹರಾಗಿರುತ್ತಾರೆ. (ನೋಂದಾಯಿತ ಕಟ್ಟಡ ಕಾರ್ಮಿಕನ ಕುಟುಂಬದಲ್ಲಿ ಇರುವ ನೋಂದಾಯಿತ ನಿರ್ಮಾಣ ಕಾರ್ಮಿಕನ ಸದಸ್ಯರನ್ನು ಲೆಕ್ಕಿಸದೆ ಒಂದು ನಿರ್ದಿಷ್ಠವಾದ ಮದುವೆಗೆ ಒಂದೇ ಸಹಾಯ ಧನವಾಗಿ ಹಕ್ಕು ಸಾಧಿಸಬೇಕಾಗಿರುತ್ತದೆ).
ಈ ಸುದ್ದಿ ಓದಿ:- ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆಯನ್ನು ಬ್ಯಾಂಕ್ ಗೆ ಹೋಗದೆ ಮನೆಯಲ್ಲಿ ಕುಳಿತು ಬದಲಾಯಿಸುವ ವಿಧಾನ.!
* ನೋಂದಾಯಿತ ಕಟ್ಟಡ ಕಾರ್ಮಿಕನ ಮಗ ಅಥವಾ ಮಗಳು ಮದುವೆ ಸಹಾಯಧನವನ್ನು ಪಡೆಯಲು ವಿವಾಹ ನಿಯಮದಡಿ ಸೂಚಿಸಿರುವ ವಯಸ್ಸನ್ನು ಹೊಂದಿರಬೇಕು.ವಿವಾಹ ನೋಂದಣಾಧಿಕಾರಿಯಿಂದ ಪಡೆದ ವಿವಾಹ ನೋಂದಣಾ ಪತ್ರವನ್ನು ಅರ್ಜಿಯೊಂದಿಗೆ ಸಲ್ಲಿಸಬೇಕು.
* ಮದುವೆಯಾದ ಆರು ತಿಂಗಳೊಳಗೆ ಅರ್ಜಿ ಸಲ್ಲಿಸಬೇಕು
ಬೇಕಾಗುವ ದಾಖಲೆಗಳು:-
* ಕಾರ್ಮಿಕ ಮಂಡಳಿಯಿಂದ ನೀಡಲಾದ ಮೂಲ ಗುರುತಿನ ಚೀಟಿ
* ಉದ್ಯೋಗ ದೃಡೀಕರಣ ಪತ್ರ
* ಬ್ಯಾಂಕ್ ಖಾತೆ ವಿವರಗಳು
* ವಿವಾಹ ನೋಂದಣಾಧಿಕಾರಿಗಳಿಂದ ಪಡೆದ ವಿವಾಹ ನೋಂದಣಾ ಪತ್ರ
* ಮದುವೆಯ ಆಮಂತ್ರಣ ಪತ್ರ
* ಮದುವೆ ಕರ್ನಾಟಕ ರಾಜ್ಯದ ಹೊರಗೆ ಜರುಗಿದ್ದಲ್ಲಿ ಅಫಿಡೆವಿಟ್ ಸಲ್ಲಿಸುವುದು
* ಕುಟುಂಬದ ರೇಷನ್ ಕಾರ್ಡ್
ಅನ್ವಯಿಸುವ ವಿಧಾನ:
* ಯಾವುದೇ ಸೇವಕೇಂದ್ರಗಳಿಗೆ ಹೋಗಿ ಆನ್ಲೈನ್ ನಲ್ಲಿ ಮಂಡಳಿಯ ಅಧಿಕೃತ ವೆಬ್ಸೈಟ್ https://karbwwb.karnataka.gov.in/ ಗೆ ಭೇಟಿ ಕೊಟ್ಟು ಅರ್ಜಿ ಸಲ್ಲಿಸಬಹುದು
* ಆಫ್ ಲೈನ್ನಲ್ಲಿ ತಮ್ಮ ವ್ಯಾಪ್ತಿಯ ಕಾರ್ಮಿಕ ಇಲಾಖೆ ಕಛೇರಿಗೆ ಹೋಗಿ ಅರ್ಜಿ ಸಲ್ಲಿಸಬಹುದು.